ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಇಂದು (ಸೆ. 30) ಮಧ್ಯಾಹ್ನ ಸೆಷನ್ ಕೋರ್ಟ್ನಲ್ಲಿ A1 ಆರೋಪಿ ದರ್ಶನ್, A2 ಪವಿತ್ರಗೌಡ, ಹಾಗೂ ವಿನಯ್ ಸೇರಿ ಐದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ದರ್ಶನ್ ಪರ ಸುನೀಲ್, ಪವಿತ್ರಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಲಿದ್ದಾರೆ.
ವಿಶೇಷ ಸಾರ್ವಜನಿಕ ಅಭಿಯೋಜಕರು ಶುಕ್ರವಾರವೇ ನಟ ದರ್ಶನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದರು. ದರ್ಶನ್ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದ್ದರು. ಹೀಗಾಗಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿತ್ತು. ಇದರಿಂದಾಗಿ ದರ್ಶನ್ ಅಭಿಮಾನಿಗಳು ತುಂಬಾ ಬೇಸರಕ್ಕೆ ಒಳಗಾಗಿದ್ದರು. ಇಂದು ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ ಐವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ.
ಇನ್ನು ಶುಕ್ರವಾರ ಪವಿತ್ರಾಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ದರು. ಪವಿತ್ರಾ ಗೌಡ ಪಾತ್ರ ಹೆಚ್ಚಿಲ್ಲ, ಅದೇಗೆ ಕೊಲೆ ಆರೋಪ ಮಾಡಿದ್ದಾರೆ ಎಂದು ವಾದ ಮಂಡನೆ ಮಾಡಿದ್ದರು.
ವಿಶೇಷ ಸಾರ್ವಜನಿಕ ಅಭಿಯೋಜಕರ ಮನವಿಯಂತೆ ನ್ಯಾಯಾಲಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತ್ತು. ಈ ಹಿನ್ನಲೆ ಇಂದು ದರ್ಶನ್, ಪವಿತ್ರಾ ಸೇರಿ ಐವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ವಿಚಾರಣೆಯಲ್ಲಿ ಏನೆಲ್ಲಾ ಬದಲಾವಣೆಗಳಾಗುತ್ತೆ ದರ್ಶನ್ ಇಂದು ರಿಲೀಸ್ ಆಗ್ತಾರಾ..? ದಾಸನ ಅಭಿಮಾನಿಗಳಿಗೆ ಇದೊಂದು ಶ್ರೇಷ್ಠ ದಿನವಾಗುತ್ತಾ ಎಂಬುದು ಕಾದು ನೋಡಬೇಕಿದೆ.
Post a comment
Log in to write reviews