ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಪ್ರಾಥಮಿಕ ಶಾಲೆಗಳಿಗೆ 35000 ಹಾಗೂ ಪ್ರೌಢ ಶಾಲೆಗಳಿಗೆ 10000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮೋದನೆ ನೀಡಿದೆ. ರಾಜ್ಯದ ಒಟ್ಟು 49679 ಶಾಲೆಗಳಲ್ಲಿ ಹುದ್ದೆಗಳು ಬಹಳ ಸಮಯದಿಂದ ಖಾಲಿ ಉಳಿದಿದೆ. ಈಗಾಗಲೇ 2024-25 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗು ತಾತ್ಕಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.
Poll (Public Option)

Post a comment
Log in to write reviews