
ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿ, ಜಿಲ್ಲಾಸ್ಪತ್ರೆಯ ವ್ಯವಸ್ಥೆ ಪರಿಶೀಲಿಸಿದ್ದಾರೆ. ಇದೇ ವೇಳೆ "ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಲು ತಕ್ಷಣವೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ಮಾಡಿದ್ದಾರೆ. ಸಮುದಾಯದ ಆರೋಗ್ಯ ಮತ್ತು ಸುರಕ್ಷತೆಗೆ ನಮ್ಮ ಸರಕಾರ ಬದ್ಧವಾಗಿದೆ," ಎಂದು ತಿಳಿಸಿದರು.
ಇದೇ ವೇಳೆ ಸಚಿವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು, ವೈದ್ಯರ ತಂಡದೊಂದಿಗೆ ಸಚಿವರು ಚರ್ಚಿಸಿದರು. ನಂತರ ಉತ್ತಮ ಚಿಕಿತ್ಸೆ, ಆರೈಕೆಯ ಭರವಸೆ ನೀಡಿದರು. ಡೆಂಗ್ಯೂ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸಿ, ಜನರಲ್ಲಿ ಅರಿವು ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.
Poll (Public Option)

Post a comment
Log in to write reviews