2024-09-19 04:37:50

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಫೋನ್ ಟ್ರ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ ? : ಡಿ. ಕೆ. ಶಿ

ಬೆಂಗಳೂರು: ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಭಯೋತ್ಪಾದಕರ ಫೋನನ್ನು ಅನುಮತಿ ಪಡೆದು ಟ್ಯಾಪ್ ಮಾಡಲಾಗುತ್ತದೆ. ಇವರು ನಮ್ಮ ರಾಜ್ಯದ ನಾಯಕರು, ಇವರ ಫೋನ್ ಟ್ಯಾಪ್ ಮಾಡುವ ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ. ಪ್ರಚಾರಕ್ಕಾಗಿ ಆರೋಪ ಮಾಡುತ್ತಿದ್ದಾರೆ."

ಪೆನ್ ಡ್ರೈವ್ ಪ್ರಕರಣದಲ್ಲಿ ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ಅವರ ಪಾತ್ರದ ಬಗ್ಗೆ ಆರೋಪ ಮಾಡಿರುವ ಕುರಿತು ಕೇಳಿದಾಗ "ನನಗೂ ಈ ಪ್ರಕರಣಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ನನ್ನ ಹೆಸರನ್ನು ಪ್ರಸ್ತಾಪ ಮಾಡದಿದ್ದರೆ ಅವರಿಗೆಲ್ಲ ನಿದ್ದೆ ಬರುವುದಿಲ್ಲ. ಮಾಧ್ಯಮಗಳು ಸಹ ಈ ವಿಚಾರದಲ್ಲಿ ನೈತಿಕತೆಯ ಗಡಿ ಮೀರಬಾರದು. ಉಪ್ಪು ತಿಂದವನು ನೀರು ಕುಡಿಯಬೇಕು ಎಂದು ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಕಾನೂನು ತನ್ನ ಕ್ರಮ ತೆಗೆದುಕೊಳ್ಳುತ್ತದೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ" ಎಂದರು.

ಡಿ.ಕೆ.ಶಿವಕುಮಾರ್, ದೇವರಾಜೇಗೌಡ ಮತ್ತು ಶಿವರಾಮೇಗೌಡ ಅವರ ನಡುವಿನ ಸಂಭಾಷಣೆ ಆಡಿಯೋ ಬಿಡುಗಡೆ ಬಗ್ಗೆ ಕೇಳಿದಾಗ "ನಾನು ಯಾರ ಜೊತೆಯೂ ಮಾತನಾಡಬಾರದು ಮಾತನಾಡಿಲ್ಲ. ಯಾರಿಗೂ ನಾನು ಜಿಪಿಎ ಕೊಟ್ಟಿಲ್ಲ. ನಾನೊಬ್ಬ ರಾಜಕಾರಣಿ, ನನ್ನನ್ನು ಭೇಟಿ ಮಾಡಲು ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷದ ಕಾರ್ಯಕರ್ತರೂ ಬರುತ್ತಾರೆ. ಅವರು ಬಿಜೆಪಿಯವರು, ನನ್ನ ಭೇಟಿಗೆ ಸಮಯ ಕೇಳಿದ್ದರು. ನಾನು ಕೊಡಲಿಲ್ಲ. ಅರ್ಧ ನಿಮಿಷವೂ ನಾನು ಯಾರ ಬಳಿಯೂ ಮಾತನಾಡಿಲ್ಲ. ನನಗೂ ರಾಜಕೀಯ, ವ್ಯವಹಾರ ಪ್ರಜ್ಞೆ ಇದೆ. ಈ ವಿಚಾರದ ಗಂಭೀರತೆಯೂ ನನಗೆ ಅರ್ಥವಾಗುತ್ತದೆ, ಡಿ.ಕೆ.ಶಿವಕುಮಾರ್ ಜೈಲಿಗೆ ಹೋದಾಗ ನಾನು ಅವರ ತಾಯಿಯನ್ನು ಸಾಂತ್ವನ ಮಾಡಿದ್ದೆ, ಆದರೆ ಅವರು ನನ್ನ ತಂದೆಗೆ ನೋವು ನೀಡುವುದು ಸರಿಯೇ ಎಂದು ಕುಮಾರಸ್ವಾಮಿ ಹೇಳಿರುವ ಬಗ್ಗೆ ಕೇಳಿದಾಗ, "ನನಗೆ ಅವರ ಪರಿಸ್ಥಿತಿ ಬಗ್ಗೆ ಅನುಕಂಪವಿದೆ. ನಾನು ಈ ವಿಚಾರದಲ್ಲಿ ಯಾರ ಬಗ್ಗೆಯೂ ಅಂದೂ ಮಾತನಾಡಿಲ್ಲ, ಇಂದೂ ಮಾತನಾಡುವುದಿಲ್ಲ" ಎಂದರು.

Post a comment

No Reviews