
ಕೋಲಾರ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆ ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೊಡ್ಡೂರು ಕರಪನಹಳ್ಳಿಯ ಕೆರೆಯಲ್ಲಿ ತುರ್ತು ಭೂಸ್ಪರ್ಶವಾಗಿದೆ.
ಮೂವರು ವಾಯುಸೇನೆಯ ಪೈಲಟ್‌ಗಳು ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೇ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದ ಹಿನ್ನೆಲೆಯಲ್ಲಿ ಒರ್ವ ಮಹಿಳಾ ಪೈಲಟ್ ಸೇರಿದಂತೆ ಮೂವರು ಸೇಫ್ ಆಗಿದ್ದಾರೆ.
ಬೆಂಗಳೂರಿನ ಯಲಹಂಕ ಏರ್ ಇಂಡಿಯಾಗೆ ಸೇರಿದ ಈ ಹೆಲಿಕಾಪ್ಟರ್ ತರಬೇತಿ ನಿಮಿತ್ತ ಕೋಲಾರದ ಕೆಜಿಎಫ್ ಹಾಗೂ ಬಂಗಾರಪೇಟೆ ಸುತ್ತಮುತ್ತ ಹಾರಾಟ ನಡೆಸುತಿತ್ತು ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಯಲಹಂಕ ತಂತ್ರಜ್ಞರ ತಂಡ ಬಂದ ಬಳಿಕ ತಾಂತ್ರಿಕ ದೋಷ ಸರಿಪಡಿಸಲಿದ್ದು, ಬಳಿಕ ಇಲ್ಲಿಂದ ಹೆಲಿಕಾಪ್ಟರ್ ವಾಪಸ್ ಆಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Poll (Public Option)

Post a comment
Log in to write reviews