
ಕೈಗಾರಿಕೋದ್ಯಮಿ ರತನ್ ಟಾಟಾ ನಿಧನರಾಗಿದ್ದಾರೆ. 86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಗೆ ತುತ್ತಾಗಿ ಉಸಿರು ನಿಲ್ಲಿಸಿದ್ದಾರೆ. ಸೋಮವಾರದಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾದ ಅವರು ಬುಧವಾರ ರಾತ್ರಿಯಂದು ಕೊನೆಯುಸಿರೆಳೆದಿದ್ದಾರೆ.
ಟಾಟಾಗೆ ಮಹಾರಾಷ್ಟ್ರ ಸರ್ಕಾರವು ಅಂತಿಮ ವಿಧಿವಿಧಾನವನ್ನು ಸಲ್ಲಿಸಲಿದೆ. ಅವರ ಕುಟುಂಬ ಜೊತೆಯಾಗಿ ನಿಂತು ಕೊನೆಯ ಕಾರ್ಯವನ್ನು ಮಾಡಲಿದೆ. ಪಾರ್ಥಿವ ಶರೀರವನ್ನು ಇಂದು ದಕ್ಷಿಣ ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್‌ನಲ್ಲಿ (NCPA) ತೆಗೆದುಕೊಂಡು ಹೋಗಲಾಗುತ್ತದೆ.
ಇಂದು ಬೆಳಿಗ್ಗೆ 10.30 ರಿಂದ ಸಂಜೆ 3.30 ರವರೆಗೆ ರತನ್ ಟಾಟಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 3.30ರ ಬಳಿಕ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ವರ್ಲಿ ಚಿತಾಗಾರಕ್ಕೆ ಕೊಂಡೊಯ್ಯಲಾಗುತ್ತದೆ. ಗೃಹ ಸಚಿವ ಅಮಿತ್ ಶಾರವರು ರತನ್ ಟಾಟಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು, ‘ನೈತಿಕತೆ ಮತ್ತು ಉದ್ಯಮಶೀಲತೆಯ ವಿಶಿಷ್ಟ ಮಿಶ್ರಣ’ ಎಂದು ಕರೆಯುವ ಮೂಲಕ ಬೇಸರ ವ್ಯಕ್ತ ಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸಹ ಸಂತಾಪ ವ್ಯಕ್ತಪಡಿಸಿದ್ದಾರೆ.
Poll (Public Option)

Post a comment
Log in to write reviews