
ಬೆಂಗಳೂರು: ಇಲ್ಲಿನ ಕಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ ಭಯೋತ್ಪಾದಕ ತಮಿಳುನಾಡು ಹಿಜ್ಬ್-ಉತ್-ತಹ್ರೀರ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎಂದು ವರದಿ ತಿಳಿಸಿದೆ.
ಅಜೀಜ್ ಅಹ್ಮದ್ ಎಂದು ಗುರುತಿಸಲ್ಪಟ್ಟ ಶಂಕಿತ ಭಯೋತ್ಪಾದಕನನ್ನು ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾದ ಜೆಡ್ಡಾಕ್ಕೆ ತಪ್ಪಿಸಿಕೊಂಡು ಹೋಗುತ್ತಿದ್ದಾಗ ಬಂಧಿಸಲಾಯಿತು ಎಂದು ತಿಳಿದು ಬಂದಿದೆ.
ವಲಸೆ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಬಂಧಿಸಲಾಗಿದೆ. ಶಂಕಿತ ಭಯೋತ್ಪಾದಕ ಮತ್ತು ಆತನ ಪತ್ನಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
ಶಂಕಿತ ಉಗ್ರನನ್ನು ವಶಕ್ಕೆ ಪಡೆದ ತಕ್ಷಣ ಆತನ ಪತ್ನಿ ದೂರು ನೀಡಲು ಬಂದಿದ್ದರು. ಮಹಿಳೆ ತನ್ನ ಪತಿಯೊಂದಿಗೆ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ತನ್ನ ಪತಿಯನ್ನು ಅಪರಿಚಿತ ವ್ಯಕ್ತಿಗಳು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಶಂಕಿತ ಉಗ್ರನ ಪತ್ನಿ ದೂರು ನೀಡಿದ್ದರು.
Poll (Public Option)

Post a comment
Log in to write reviews