2024-09-19 04:53:58

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿಯ ಬಂಧನ 

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಪಿಯೋ ಕಾರಿನಲ್ಲಿ ಸಂಚರಿಸಿ ದರೋಡೆಗೆ ಹೊಂಚು ಹಾಕಿದ್ದ ಏಳು ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಉಡುಪಿಯಿಂದ ಕಾಪು‌ ಕಡೆಗೆ ಬರುತ್ತಿದ್ದ ಕಾಪು‌ ಸರ್ಕಲ್ ಇನ್ಸ್ಪೆಕ್ಟರ್ ಜಯಶ್ರೀ ಮಾನೆ ಉದ್ಯಾವರ ಸೇತುವೆ ಮೇಲೆ ಸ್ಕಾರ್ಪಿಯೋ ಕಾರೊಂದು ನಿಂತಿರುವುದನ್ನು ಗಮನಿಸಿದ್ದರು. ಕಾರಿನ ಬಳಿ ಪರಿಶೀಲಿಸಿದಾಗ ಆರೋಪಿಗಳು ಕಾರನ್ನು ಚಲಾಯಿಸಿಕೊಂಡು ಕಾಪು ಕಡೆಗೆ ತೆರಳಿದ್ದರು.
ಕೂಡಲೇ ಕಾಪು ಮತ್ತು ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಕಾಪು ಇನ್ಸ್ ಪೆಕ್ಟರ್ ಅಬ್ದುಲ್ ಖಾದರ್ ನೇತೃತ್ವದ ತಂಡ ಕೋತಲಕಟ್ಟೆ ಬಳಿ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದೆ. ಅನುಮಾನಾಸ್ಪದ ವಿಚಾರದ ಮೇಲೆ ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಪರಂಗಿಪೇಟೆ ಎಂಬುವರನ್ನು ಬಂಧಿಸಲಾಗಿದೆ.

Post a comment

No Reviews