
ಬೆಂಗಳೂರು: ಮೈಮೇಲೆ ಕೆಜಿಗಟ್ಟಲೇ ಚಿನ್ನ, ಕೈಯಲ್ಲಿ ಎಕೆ 47, ಹಿಂದೆ-ಮುಂದೆ ಬಾಡಿಗಾರ್ಡ್ಸ್ ಇಟ್ಟುಕೊಂಡು ಸುಂದರಿಯರ ನಡುವೆ ರೀಲ್ಸ್ ಶೋಕಿ ಮಾಡುತ್ತಿದ್ದ ರೀಲ್ಸ್ ಸ್ಟಾರ್ ಅರುಣ್ ಕಟಾರೆ ಇದೀಗ ಜೈಲು ಸೇರಿದ್ದಾನೆ.
ಅರುಣ್ ಕಟಾರೆ ಮೈಮೇಲೆ ಕೆಜಿಗಟ್ಟಲೇ ಚಿನ್ನ ಹಾಕಿಕೊಂಡು, ಬಾಡಿಗಾರ್ಡ್ಸ್ ಇಟ್ಟುಕೊಂಡಿದ್ದ. ಹಾಗೆಯೇ ಅವರ ಕೈಲಿ ಎಕೆ 47 ಮಾದರಿಯ ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್ ಮಾಡುತ್ತಿದ್ದ. ಈತನ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸಾರ್ವಜನಿಕರ ಮಾಹಿತಿ ಮೇರೆಗೆ ಕೊತ್ತನೂರು ಪೊಲೀಸರು, ಅರುಣ್ ಕಟಾರೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
Poll (Public Option)

Post a comment
Log in to write reviews