ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಬಿಐ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರನ್ನು ತಿಹಾರ್ ಜೈಲಿನಿಂದ ತನ್ನ ಕಸ್ಟಡಿಗೆ ಪಡೆದಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆಗೆ ನಿಗದಿಪಡಿಸಿದ್ದು, ಇದರ ಒಂದು ದಿನದ ಮೊದಲು ಈ ಘಟನೆ ನಡೆದಿದೆ.
ಸೋಮವಾರ, ಕೇಂದ್ರ ತನಿಖಾ ಸಂಸ್ಥೆಯು ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಪರೀಕ್ಷಿಸಿತ್ತು. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿತ್ತು. ಇಂದು ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣಾ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.
Post a comment
Log in to write reviews