
ಹೈದರಾಬಾದ್; ಹೈದರಾಬಾದ್‌ನ ಸಂಸದ ಅಸಾದುದ್ದೀನ್ ಓವೈಸಿ ಅವರು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಜೈ ಪ್ಯಾಲಿಸ್ಟೈನ್ ಜೈ ಭೀಮ್ ಎಂದು ಘೋಷಣೆ ಕೂಗಿದ್ದಾರೆ.
ಓವೈಸಿ ಅವರು ಐದನೇ ಬಾರಿ ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ತಾವು ಪ್ರಾಮಾಣಿಕತೆಯಿಂದ ಭಾರತದ ತಳಮಟ್ಟದಲ್ಲಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.
ಅಸಾದುದ್ದೀನ್ ಓವೈಸಿ ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಬಿಜೆಪಿ ಸಂಸದರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದರು. ಇದಕ್ಕೆ ಯಾವುದೇ ರೀತಿ ಪ್ರತಿಕ್ರಿಯೆ ನೀಡದ ಓವೈಸಿ ಕೊನೆಯಲ್ಲಿ ಜೈ ಭೀಮ್ ಜೈ ತೆಲಂಗಾಣ ಜೈ ಪ್ಯಾಲಿಸ್ಟೈನ್ ಎಂದು ಕೂಗಿದರು. ಅವರು ಕೂಗಿಗೆ ವಿಪಕ್ಷ ಸಂಸದರು ವಿರೋಧಿಸಿದರು.
Poll (Public Option)

Post a comment
Log in to write reviews