
ರಾಯಚೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆಗೆ ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ. 17 ವರ್ಷದ ಅಪ್ರಾಪ್ತೆ ಬಹಿರ್ದೆಸೆಗೆ ತೆರಳಿದ್ದ ವೇಳೆ ಆಕೆಯನ್ನ ಎಳೆದೊಯ್ದು ಪೊದೆಯೊಂದರಲ್ಲಿ ಅತ್ಯಾಚಾರವೆಸಗಿ ಬಳಿಕ ಕಲ್ಲಿನಿಂದ ಜಜ್ಜಿ ಹತ್ಯೆಗೈಯಲು ಯತ್ನಿಸಿದ್ದಾನೆ. ಇದೀಗ ಆರೋಪಿ ಬಸವರಾಜ್ ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದು ತನಿಕೆ ಮುಂದುವರೆಸಿದ್ದಾರೆ.
Poll (Public Option)

Post a comment
Log in to write reviews