ಟಾಪ್ 10 ನ್ಯೂಸ್
ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನ: ರಾಜ್ಯ ಬಿಜೆಪಿ ನಾಯಕರು ಪೊಲೀಸ್ ವಶ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರ ಖಂಡಿಸಿ ಸಿಎಂ ಮನೆಗೆ ಮುತ್ತಿಗೆ ಹಾಕಲು ಕುಮಾರ ಕೃಪಾ ವಸತಿ ಗೃಹದಿಂದ ಹೊರಟ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಜನಪ್ರತಿನಿಧಿಗಳನ್ನು ಪೊಲೀಸರು ವಶಕ್ಕೆ ಪಡೆದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ಇಂದು ಕುಮಾರಕೃಪಾ ವಸತಿಗೃಹದಿಂದ ಕಾಲ್ನಡಿಗೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಹೊರಟರು ಕುಮಾರಕೃಪಾ ವಸತಿಗೃಹದಿಂದ ಹೊರಟ ಬಿಜೆಪಿ ನಾಯಕರನ್ನು ಪೊಲೀಸರು ಮಾರ್ಗದಲ್ಲೇ ತಡೆದು, ಬಂಧಿಸಿ ಕರೆದೊಯ್ದರು.
Poll (Public Option)

Post a comment
Log in to write reviews