
ಹುಬ್ಬಳ್ಳಿ: ಯುವಕನನ್ನು ಹತ್ಯೆಗೈದ ಕೆಲವೆ ಗಂಟೆಗಳಲ್ಲಿ ಪೊಲೀಸರಿಂದ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಪೊಲೀಸರಿಂದ ಗುಂಡೇಟು.
ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಸೇರಿ ಶಿವು ಚಂದ್ರಶೇಖರ ಕಮ್ಮಾರ ಎಂಬಾತನನ್ನು ಚಾಕು ಇರಿದು ಹತ್ಯೆಗೈದಿದ್ದರು.
ಇಬ್ಬರು ಸೇರಿ ಉಳಿದ ಆರೋಪಿಗಳನ್ನು ತೋರಿಸುವುದಾಗಿ ಕರೆದೊಯ್ದು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರ ಕಾಲಿಗೂ ಪೊಲೀಸರು ಗುಂಡೇಟು ನೀಡಿದ್ದಾರೆ.
ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಕಿಮ್ಸ್ ಆಸ್ಪತ್ರೆಗೆ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯ ಆರೋಗ್ಯ ಬಗ್ಗೆ ಕಮಿಷನರ್ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಇದೇ ವೇಳೆ ಗುಂಡೇಟು ತಿಂದ ಆರೋಪಿಗಳನ್ನು ಪರಿಶೀಲನೆ ನಡೆಸಿದರು.
Poll (Public Option)

Post a comment
Log in to write reviews