
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆವೊಂದು ನಡೆದಿದ್ದು, ರಾಜಕೀಯದಲ್ಲಿ ಹೊಸ ಸಂಚಲನವೊಂದು ಶುರುವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ದಿಢೀರ್ ಭೇಟಿಯಾಗಿದ್ದಾರೆ. ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ಬಿವೈ ವಿಜಯೇಂದ್ರ ಮತ್ತು ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ. ಇಬ್ಬರು ನಾಯಕರ ಭೇಟಿ ಭಾರಿ ಕುತೂಹಲ ಮೂಡಿಸಿದೆ.
ಮುಡಾ ಹಗರಣ ಪ್ರಕರಣದಲ್ಲಿ ಸಿದರಾಮಯ್ಯ ಅವರು ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆ, ಮುಖ್ಯಮಂತ್ರಿ ಬದಲಾವಣೆಯ ಕೂಗು ಕೇಳಿಬಂದಿದೆ. ಸಿಎಂ ಕುರ್ಚಿ ಮೇಲೆ ದಲಿತ ನಾಯಕನೇ ಕೂಡಬೇಕೆಂಬ ವಾದ ಜೋರಾದ ಹಿನ್ನೆಲೆಯಲ್ಲಿ ಆಕ್ಟಿವ್ ಆದ ಸತೀಶ್ ಜಾರಕಿಹೊಳಿ ಇತ್ತೀಚಿಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.
Poll (Public Option)

Post a comment
Log in to write reviews