ಮುಡಾ ಅಕ್ರಮವನ್ನು ಖಂಡಿಸಿ ಬೃಹತ್ ಪ್ರತಿಭಟನೆ: ಬಿ.ವೈ ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಕೆ !
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮವನ್ನು ಖಂಡಿಸಿ ಬಿಜೆಪಿ ವತಿಯಿಂದ ಇದೇ ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಬೆಂಗಳೂರು ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು(ಜುಲೈ 10) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಜು.12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಸಿದರು.
ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್ಐಟಿ ತನಿಖೆ ಮಾಡಿ ನಡೆಸುವುದು ಸೂಕ್ತವಲ್ಲ. ಈ ಬಾರಿ ಹಗರಣದ ಸಮಗ್ರ ತನಿಖೆಯನ್ನು ಸಿಬಿಐಗೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
Poll (Public Option)

Post a comment
Log in to write reviews