
ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ ಧಾವಿಸಿದ್ದು, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇನ್ನೂ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ.
ಮೃತ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದ್ದು, ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗುತ್ತದೆ. ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿ ಎಂದಿದ್ದಾರೆ. ಜತೆಗೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಡೆದಿರುವ ಭೀಕರ ಕಟ್ಟಡ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮಂಗಳವಾರ ಸಂಜೆಯಿಂದಲೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇದುವರೆಗೆ 8 ಕಾರ್ಮಿಕರ ಮೃತದೇಹಗಳನ್ನ ಹೊರಗೆ ತೆಗೆಯಲಾಗಿದೆ. ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
Poll (Public Option)

Post a comment
Log in to write reviews