
ಅಹ್ಮದಾಬಾದ್: ಹಿಂದೂಗಳ ಕುರಿತು ರಾಹುಲ್ ಗಾಂಧಿ ಸಂಸತ್ತಿನಲ್ಲಿ ನೀಡಿದ ಹೇಳಿಕೆಗೆ ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅನಧಿಕೃತ ರಾಜ್ಯ ಕಚೇರಿಯಾದ ರಾಜೀವ್ ಗಾಂಧಿ ಭವನದ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದ ಬಜರಂಗದಳ ಕಾರ್ಯಕರ್ತರು, ಕಚೇರಿ ಎದುರು ರಸ್ತೆಯನ್ನು ತಡೆಹಿಡಿದರು. ಇದರೊಂದಿಗೆ ಕಚೇರಿಯ ಬಳಿಯಿದ್ದ ಕಾಂಗ್ರೆಸ್ ಪಕ್ಷದ ಕೆಲ ಭಿತ್ತಿಚಿತ್ರಗಳನ್ನೂ ವಿರೂಪಗೊಳಿಸಿದರು ಎನ್ನಲಾಗಿದೆ.
Poll (Public Option)

Post a comment
Log in to write reviews