ಟಾಪ್ 10 ನ್ಯೂಸ್
ಮೆಜೆಸ್ಟಿಕ್ ಸುತ್ತಮುತ್ತ ವಾಹನಗಳ ನಿಲುಗಡೆಗೆ ನಿಷೇಧ : ಸಂಚಾರ ಪೊಲೀಸ್ ಆದೇಶ

ಬೆಂಗಳೂರು: ನಗರದ ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ವಿಧಿಸಿ ಬೆಂಗಳೂರು ಸಂಚಾರ ಪೊಲೀಸ್ ವಿಭಾಗ ಆದೇಶಿಸಿದೆ. ಮೆಜೆಸ್ಟಿಕ್, ಗಾಂಧಿನಗರ ಹಾಗೂ ಆನಂದ್ ರಾವ್ ಸರ್ಕಲ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿದರೆ ಭಾರೀ ದಂಡ ವಿಧಿಸುವ ಎಚ್ಚರಿಕೆಯನ್ನು ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಬದಲಿಯಾಗಿ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣವನ್ನು ವಾಹನಗಳ ಮಾಲೀಕರು ಬಳಸಬಹುದು ಎಂದು ಪೋಲಿಸರು ತಿಳಿಸಿದ್ದಾರೆ.
ಪ್ರತಿ ಗಂಟೆಗೆ ವಾಹನ ನಿಲುಗಡೆಗೆ 20-30 ರೂ. ನಿಗದಿ ಮಾಡಲಾಗಿದೆ. ನಗರದ ಯಾವುದೇ ಭಾಗದಿಂದ ಜನರು ತಮ್ಮ ವಾಹನದಲ್ಲಿ ಬಂದರೂ ಪಾರ್ಕಿಂಗ್ ನಂತರ ವಿಧಾನಸೌಧ, ಹೈಕೋರ್ಟ್, ರೈಲ್ವೇ ನಿಲ್ದಾಣ ಸೇರಿದಂತೆ ಗಾಂಧಿ ನಗರದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋಗಲು ಉಚಿತ ಸಂಚಾರ ವ್ಯವಸ್ಥೆಯನ್ನು ಗುತ್ತಿಗೆದಾರರೇ ಮಾಡುವುದು ಎಂಬ ಮಾಹಿತಿ ಲಭ್ಯವಾಗಿದೆ.
Poll (Public Option)

Post a comment
Log in to write reviews