
ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಧಾರಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ನಡುವೆ ಮಳೆಯಿಂದ ತಗ್ಗು ಪ್ರದೇಶ, ರಾಜಕಾಲುವೆ, ಕೆರೆಯ ಆಸುಪಾಸಿನ ಜಾಗಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾದ ಬೆನ್ನಲ್ಲೇ ಬಿಬಿಎಂಪಿ ಕೆಲ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ನಿರಂತರ ಮಳೆಯಿಂದ ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಕಾಲರಾ, ಜಾಂಡಿಸ್, ಡೆಂಘೀ, ಕರುಳಬೇನೆ, ಚಿಕನ್ ಗುನ್ಯಾ ಮಲೇರಿಯಾ ಮುಂತಾದ ರೋಗಗಳ ಆತಂಕ ಎದುರಾಗಿದೆ. ಆದ್ದರಂತೆ ಬೆಂಗಳೂರಿನ ಹೋಟೆಲ್ ಗಳಲ್ಲಿ ಗ್ರಾಹಕರಿಗೆ ಬಿಸಿ ನೀರು ನೀಡುವುದು ಕಡ್ಡಾಯವಾಗಿರುವಂತೆ, ಹಾಗೂ ಬೀದಿಬದಿ ಆಹಾರ, ಕತ್ತರಿಸಿದ ಹಣ್ಣು (ಫ್ರೂಟ್ ಬೌಲ್) ಮಾರಾಟ ನಿಷೇಧಿಸಲಾಗಿದೆ.
ಸದ್ಯ ಬಿಬಿಎಂಪಿ ಹಾಗೂ ಜಲಮಂಡಳಿ ವತಿಯಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗೆ ಅದೇಶ ನೀಡಲಾಗಿದೆ. ಆರ್ ಆರ್ ನಗರ, ಮಹಾದೇವಪುರ, ಯಲಹಂಕ, ಬೊಮ್ಮನಹಳ್ಳಿ ವಲಯಗಳಲ್ಲಿ ಕುಡಿಯುವ ನೀರಿನ ಪರೀಕ್ಷೆ ಮಾಡಿ ವರದಿ ನೀಡುವಂತೆ ಸೂಚಿಸಲಾಗಿದೆ.
Poll (Public Option)

Post a comment
Log in to write reviews