2024-12-24 06:36:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳು ಸಿಸಿಬಿ ವಶಕ್ಕೆ

ಬೆಂಗಳೂರು: ನಗರದ ವಿವಿದೆಡೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಮೂಲದವರನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ರಾಮಮೂರ್ತಿ ನಗರ, ಮಾರತ್ತಹಳ್ಳಿ, ಬೆಳ್ಳಂದೂರು, ಬಂಡೇಪಾಳ್ಯ, ವರ್ತೂರು, ಹೆಬ್ಬಗೋಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿ ತಂಡ ವಿಶೇಷ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಅಕ್ರಮವಾಗಿ ನೆಲೆಸಿದ್ದ 25 ಮಂದಿ ಬಾಂಗ್ಲಾ ಪ್ರಜೆಗಳನ್ನು ನಗರದ ವಿವಿದೆಡೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ  ಅವರು ನೆಲೆಸಿದ್ದ  ಶೆಡ್‌ಗಳ ಮೇಲೆದಾಳಿ ಮಾಡಿ  ಪ್ರಮುಖ ದಾಖಲೆ ಮತ್ತು ಮೊಬೈಲ್ ಗಳನ್ನ  ಜಪ್ತಿ ಮಾಡಿದ್ದಾರೆ.
ಈ ಬಾಂಗ್ಲಾದಿಂದ ಬಂದ ನುಸುಳುಕೋರು ಕಳೆದ 20 ವರ್ಷಗಳಿಂದ ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದಾರೆ ಎನ್ನಲಾಗುತ್ತಿದೆ. ಬಾಂಗ್ಲಾ ಮೂಲದ ನೂರುಲ್ಲಾ ಈ ನುಸುಳುಕೋರರ ಕಿಂಗ್‌ಪಿನ್ ಎನ್ನಲಾಗಿದೆ. ಈತನ ಮುಖಾಂತರ ಬೆಂಗಳೂರು ನಗರ ಸೇರಿದಂತೆ ಭಾರತದ ಹಲವು ನಗರಗಳಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎನ್ನಲಾಗುತ್ತಿದೆ. ಬಾಂಗ್ಲಾದಿಂದ ಬಂದ ವಲಸಿಗರು ಸಣ್ಣಪುಟ್ಟ ಕೆಲಸ ಮಾಡಿಕೊಂಡು ತಮ್ಮ ಜೀವನ ಮಾಡುತ್ತಿದ್ದರು. ಈ ಪೈಕಿ ಇಬ್ಬರು ಬಾಂಗ್ಲಾ ಪ್ರಜೆಗಳು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಪಾಲಗಿರುವ ವಿಚಾರ ಬೆಳೆಕಿಗೆ ಬಂದಿದೆ.

Post a comment

No Reviews