
ಹಾವೇರಿ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸದಸ್ಯ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇಂದು(ಜುನ್ 15 ಸೋಮವಾರ) ರಾಜೀನಾಮೆ ನೀಡಿದ್ದಾರೆ.
ವಿಧಾನಸೌಧದ ಮೊದಲ ಕಟ್ಟಡದಲ್ಲಿ ಇರುವ ಸ್ಪೀಕರ್ ಕಚೇರಿಗೆ ತೆರಳಿ ಖುದ್ದಾಗಿ ಯು.ಟಿ.ಖಾದರ್‌ಗೆ ರಾಜೀನಾಮೆ ನೀಡಿದ್ದು, ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಶಾಸಕರಾದ ಜಿ.ಟಿ ದೇವೇಗೌಡ, ಮುನಿರಾಜು, ಡಾ. ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಮಾರುತಿ ಮೂಳೆ, ಬೋಜೆಗೌಡ ಮತ್ತಿತರರು ಹಾಜರಿದ್ದರು.
Poll (Public Option)

Post a comment
Log in to write reviews