
ಬೆಂಗಳೂರು ಗ್ರಾಮಾಂತರ: ನಿರ್ಜನ ಪ್ರದೇಶದಲ್ಲಿ ನವಜಾತ ಶಿಶುವೊಂದನ್ನು ಜೀವಂತವಾಗಿ ಹೂತು ಹಾಕಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಕತ್ರಿಗುಪ್ಪೆ ದಿಣ್ಣೆ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ಬಹಿರ್ದೆಸೆಗೆ ಹೋದಾಗ ಮಗುವಿನ ಚೀರಾಟ ಕೇಳಿ, ಸ್ಥಳಕ್ಕೆ ದೌಡಾಯಿಸಿದ್ದಾರೆ. ನವಜಾತ ಶಿಶುವನ್ನು ಮಗುವನ್ನು ರಕ್ಷಿಸಿದ್ದಾರೆ.
ಬಳಿಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮಕ್ಕಳ ರಕ್ಷಣಾಧಿಕಾರಿ ಹೆಚ್.ಕೆ.ಆಶಾ ತಂಡ ಮಗುವನ್ನು ಸಂರಕ್ಷಿಸಿದ್ದಾರೆ. ದೊಮ್ಮಸಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮಗುವಿಗೆ ಸಣ್ಣಪುಣ್ಣ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದೆ. ಇನ್ನೂ ಈ ಘಟನಾ ಸಂಬಂದ ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Poll (Public Option)

Post a comment
Log in to write reviews