
ಬೆಂಗಳೂರು: ನಗರದ ಹೆಣ್ಣೂರು ಬಳಿ ಇರುವ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಘೋರ ದುರಂತ ಸಂಭವಿಸಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬಿಬಿಎಂಪಿ ಹೊರಮಾವು ಉಪವಿಭಾಗದ ಎಇಇ ಕೆ.ವಿನಯ್ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ.
ಕಟ್ಟಡ ತೆರವಿಗೆ ಸ್ಥಿರೀಕರಣ ಆದೇಶ ಹೊರಡಿಸಿದ್ದರೂ ಎಇಇ ಕೆ.ವಿನಯ್ ನಿಗದಿತ ಅವಧಿಯೊಳಗೆ ಕ್ರಮಕೈಗೊಂಡಿಲ್ಲ. ಮೇಲ್ನೋಟಕ್ಕೆ 8 ಕಾರ್ಮಿಕರ ಸಾವಿಗೆ ಕಾರಣಕರ್ತರಾಗಿದ್ದಾರೆ. ಹೀಗಾಗಿ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ಇನ್ನೂ ಕಟ್ಟಡ ಮಾಲೀಕ ಮುನಿರಾಜ್ ರೆಡ್ಡಿಗೆ ಬಿಬಿಎಂಪಿ ಅಧಿಕಾರಿಗಳು ಮೂರು ಬಾರಿ ನೋಟಿಸ್ ನೀಡಿದ್ದರು. ಏಪ್ರಿಲ್‌ನಲ್ಲೇ ಕಟ್ಟಡ ನಿರ್ಮಾಣ ಬಗ್ಗೆ ಬಿಬಿಎಂಪಿ ನೋಟಿಸ್ ನೀಡಿದ್ರೂ ಮಾಲೀಕ ಯಾವುದೇ ಉತ್ತರ ನೀಡಿಲ್ಲ ಎಂದು ತಿಳಿದು ಬಂದಿದೆ.
Poll (Public Option)

Post a comment
Log in to write reviews