
ನವದೆಹಲಿ : 2024ರ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಭಾರತ ಕ್ರಿಕೆಟ್ ತಂಡಕ್ಕೆ 125 ಕೋಟಿ ರೂಪಾಯಿಗಳ ಭರ್ಜರಿ ಬಹುಮಾನವನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದ್ದಾರೆ. ಇದೆ ವೇಳೆ ಟೀಂ ಇಂಡಿಯಾದ ಎಲ್ಲಾ ಆಟಗಾರರು ಹಾಗೂ ಸಿಬ್ಬಂದಿಯನ್ನೂ ಅವರು ಹಾಡಿ ಹೊಗಳಿದ್ದಾರೆ.
ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ಶನಿವಾರ ನಡೆದ ಟಿ-20 ವಿಶ್ವಕಪ್ ಫೈನಲ್‌ನಲ್ಲಿ ಭಾರತವು ದಕ್ಷಿಣ ಆಫ್ರಿಕಾ ತಂಡವನ್ನು ಏಳು ರನ್‌ಗಳಿಂದ ಸೋಲಿಸಿದೆ. ಈ ಮೂಲಕ ಟಿ-20 ವಿಶ್ವಕಪ್‌ನ ಎರಡನೇ ಪ್ರಶಸ್ತಿಗೆ ಮುತ್ತಿಕ್ಕಿದೆ. ಟೀಂ ಇಂಡಿಯಾದ ಸಾಧನೆಯನ್ನು ಶ್ಲಾಘಿಸಿರುವ ಜಯ್ ಶಾ, ಐಸಿಸಿ ಪುರುಷರ ಟಿ-20 ವಿಶ್ವಕಪ್ 2024 ಗೆದ್ದ ಟೀಂ ಇಂಡಿಯಾಗೆ 125 ಕೋಟಿಗಳ ಬಹುಮಾನದ ನಗದು ಹಣವನ್ನು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.
ತಂಡವು ಪಂದ್ಯಾವಳಿಯ ಉದ್ದಕ್ಕೂ ಅಸಾಧಾರಣ ಪ್ರತಿಭೆ, ದೃಢತೆ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅತ್ಯುತ್ತಮ ಸಾಧನೆಗಾಗಿ ಎಲ್ಲ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು ಎಂದು ಬಿಸಿಸಿಐ ಕಾರ್ಯದರ್ಶಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
Poll (Public Option)

Post a comment
Log in to write reviews