
ಮಧ್ಯಪ್ರದೇಶ: ಫ್ರಿಡ್ಜ್ ನಲ್ಲಿ ಗೋಮಾಂಸವಿಟ್ಟಿರುವ ಆರೋಪದ ಮೇರೆಗೆ ಜಿಲ್ಲಾಡಳಿತ 11 ಮನೆಗಳನ್ನು ನೆಲಸಮಗೊಳಿಸಿದೆ.
ನೈನ್‌ಪುರದ ಭೈಸವಾಹಿ ಪ್ರದೇಶದಲ್ಲಿ ಬಲಿ ಕೊಡಲು ಹೆಚ್ಚಿನ ಸಂಖ್ಯೆಯಲ್ಲಿ ಗೋವುಗಳನ್ನು ತರಲಾಗಿದೆ ಎಂಬ ಮಾಹಿತಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ರಜತ್ ಸಕ್ಲೇಚಾ ತಿಳಿಸಿದ್ದಾರೆ.
11 ಆರೋಪಿಗಳ ಮನೆಗಳಲ್ಲಿನ ರೆಫ್ರಿಜರೇಟರ್‌ಗಳಿಂದ ಹಸುವಿನ ಮಾಂಸ ವಶಪಡಿಸಿಕೊಳ್ಳಲಾಗಿದೆ. ಪ್ರಾಣಿಗಳ ಕೊಬ್ಬು, ಚರ್ಮ ಮತ್ತು ಮೂಳೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದನ್ನು ಕೋಣೆಯಲ್ಲಿ ಇರಿಸಲಾಗಿತ್ತು. ವಶಪಡಿಸಿಕೊಳ್ಳಲಾಗಿರುವುದು ಗೋಮಾಂಸ ಎಂದು ಸ್ಥಳೀಯ ಸರ್ಕಾರಿ ಪಶುವೈದ್ಯರು ಖಚಿತಪಡಿಸಿದ್ದಾರೆ. ಡಿಎನ್‌ಎ ವಿಶ್ಲೇಷಣೆಗಾಗಿ ಮಾದರಿಗಳನ್ನು ಹೈದರಾಬಾದ್‌ಗೆ ಕಳುಹಿಸಿದ್ದೇವೆ. ಸರ್ಕಾರಿ ಜಮೀನಿನಲ್ಲಿದ್ದ 11 ಆರೋಪಿಗಳ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದು ತಿಳಿಸಿದರು.
Poll (Public Option)

Post a comment
Log in to write reviews