ರಾಜಕೀಯ
ಬೆಳಗಾವಿ ಬೆಂಕಿ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ

ಬೆಳಗಾವಿ: ಇತ್ತೀಚೆಗೆ ಬೆಳಗಾವಿ ತಾಲೂಕಿನ ನಾವಗೆ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟ ಯುವಕ ಯಲಗೊಂಡ ಸಣ್ಣಮಲ್ಲಪ್ಪ ಗುಂಡ್ಯಾಗೋಳ ಅವರ ಕುಟುಂಬಸ್ಥರನ್ನು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಟಿ ಮಾಡಿ ಸಾಂತ್ವನ ಹೇಳಿದರು.
ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಯಲಗೊಂಡ ಕ್ರಿಯಾಶೀಲ ವ್ಯಕ್ತಿಯಾಗಿದ್ದ. ಆತನ ಕುಟುಂಬದೊಂದಿಗೆ ನಮ್ಮ ಕುಟುಂಬ ಜೊತೆಗಿರುತ್ತದೆ" ಎಂದು ಸಚಿವೆ ಭರವಸೆ ನೀಡಿದರು.
ಯಲಗೊಂಡ ಅವರ ತಾಯಿಯ ರೋಧನೆ ಕಂಡು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣೀರು ಹಾಕಿದರು, ಅವರಿಗೆ ಸ್ವತಃ ಹಣ್ಣು ತಿನ್ನಿಸಿ ಸಮಾಧಾನಪಡಿಸಿದರು. "ಸಾವು-ನೋವು ಎಲ್ಲವೂ ದೇವರ ಇಚ್ಛೆ. ಇದನ್ನು ತಡೆಯೋಕೆ ಯಾರಿಂದಲೂ ಸಾಧ್ಯವಿಲ್ಲ. ನೀವು ನಿಮ್ಮ ದೈನಂದಿನ ಕಾರ್ಯಗಳಲ್ಲಿ ತೊಡಗಿ" ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವು ಅಧಿಕಾರಿ ಉಪಸ್ಥಿತರಿದ್ದರು.
Poll (Public Option)

Post a comment
Log in to write reviews