
ತಮಿಳು ನಟ ರಾಘವ್ ಲಾರೆನ್ಸ್ ಅವರ ಹಂಟರ್ ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಯುವತಿಯಿಂದ 1.71 ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ನಡೆದಿದೆ.
ಬೆಂಗಳೂರು: ಇನ್ಸ್ಟಾಗ್ರಾಮ್ನಲ್ಲಿ ಮೂವಿ ಆ್ಯಡ್ ಲಿಂಕ್ ಮೂಲಕ ಪರಿಚಯವಾದ ವ್ಯಕ್ತಿ ಯುವತಿಗೆ ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಮಿಳು ನಟ ರಾಘವ್ ಲಾರೆನ್ಸ್ ಅವರ 25ನೇ ಸಿನಿಮಾ ಹಂಟರ್ನನಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಯುವತಿಯನ್ನು ವಂಚಿಸಲಾಗಿದೆ ಎಂದು ತಿಳಿದು ಬಂದಿದೆ.
ಕನ್ನಡದ ನಂದಿತಾ ಕೆ ಶೆಟ್ಟಿ ಎಂಬ ಯುವತಿ ಸಿನಿಮಾದಲ್ಲಿ ನಟಿಸಲು ಅವಕಾಶಕ್ಕಾಗಿ ಕಾಯುತ್ತಿದ್ದರು. ಇದೇ ವೇಳೆ ಇನ್ಸ್ಟಾಗ್ರಾಮ್ನಲ್ಲಿ ಮೂವಿ ಆ್ಯಡ್ ಲಿಂಕ್ ಮೂಲಕ ಸುರೇಶ್ ಕುಮಾರ್ ಎಂಬಾತನ ಪರಿಚಯವಾಗಿದೆ. ತಾನು ಹಂಟರ್ನ ಮೂವಿಯ ಕಾಸ್ಟಿಂಗ್ ಡೈರೆಕ್ಟರ್ ಎಂದು ವಂಚಕ ಪರಿಚಯಿಸಿಕೊಂಡಿದ್ದಾನೆ. ಬಳಿಕ ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ಹಂತ ಹಂತವಾಗಿ 1.71 ಲಕ್ಷ ಪಡೆದಿದ್ದಾನೆ. ಆರ್ಟಿಸ್ಟ್ ಕಾರ್ಡ್, ಅಗ್ರಿಮೆಂಟ್ ಸ್ಟಾಂಪ್ ಡ್ಯೂಟಿ, ವಿದೇಶದಲ್ಲಿ ಶೂಟಿಂಗ್ ಇರುತ್ತೆ ಪಾಸ್ ಪೋರ್ಟ್, ಟಿಕೆಟ್ ಚಾರ್ಜ್ ಅಂತ ಹಣ ಪಡೆದು ವಂಚಿಸಿದ್ದಾನೆ. ವಂಚಕನ ಮಾತು ನಂಬಿ ಆನ್ ಲೈನ್ ಮೂಲಕ ಹಣ ಪಾವತಿಸಿದ್ದ ನಂದಿತಾ, ಅನುಮಾನ ಬಂದು ಕ್ರಾಸ್ ಚೆಕ್ ಮಾಡಿದಾಗ ಅಸಲಿ ವಿಚಾರ ಬಯಲಾಗಿದೆ. ಸದ್ಯ ಈಗ ಈ ಬಗ್ಗೆ ಕೋಣನಕುಂಟೆ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದು FIR ದಾಖಲಾಗಿದೆ
Poll (Public Option)

Post a comment
Log in to write reviews