
ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಭವಾನಿ ರೇವಣ್ಣ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಅಧೀನ ನ್ಯಾಯಾಲಯ ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Poll (Public Option)

Post a comment
Log in to write reviews