
ಬೆಂಗಳೂರು: ದಕ್ಷಿಣ ಭಾರತದಿಂದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿ ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಆಯ್ಕೆಯಾಗಿದ್ದಾರೆ.
ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನ್ಡ್ ಆಫೀಸರ್ ಆಗಿ ನಿಯೋಜನೆ ಗೊಂಡಿರುವ ಅವರು ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ನಿಯೋಜನೆಗೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಭವ್ಯ ನರಸಿಂಹಮೂರ್ತಿ, ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಹಾಗೂ 2022 ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದೀನೆ ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ನಾನು ದೇಶದ ಒಳಗೆ ರಾಜಕಾರಣಿಯಾಗಿ ಜನರ ಸೇವೆ ಮಾಡುವುದರ ಜೊತೆಗೆ ಸೇನಾಧಿಕಾರಿಯಾಗಿ ದೇಶದ ರಕ್ಷಣೆ ಮಾಡಲೂ ಸಿದ್ಧಳಿದ್ದೇನೆ ಎಂದಿದ್ದಾರೆ.
ಪ್ರಸ್ತುತ ಪ್ರಾದೇಶಿಕ ಸೇನೆಯಲ್ಲಿರುವ ಕೆಲವು ಪ್ರಮುಖ ವ್ಯಕ್ತಿಗಳಲ್ಲಿ ಕ್ರಿಕೆಟ್ ಆಟಗಾರ ಎಂ.ಎಸ್.ಧೋನಿ, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಮಂತ್ರಿ ಶ್ರೀ ಸಚಿನ್ ಪೈಲಟ್, ಮಾಜಿ ಕೇಂದ್ರ ಸಚಿವ ಅನುರಾಗ ಠಾಕೂರ್ ಸೇರಿದ್ದಾರೆ.
Poll (Public Option)

Post a comment
Log in to write reviews