2024-09-19 04:56:45

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜ್ಯಾದ್ಯಂತ ಭೀಮ ಸಿನಿಮಾ ರಿಲೀಸ್ : ಬ್ಲಾಕ್‌ ಕೋಬ್ರಾಗೆ ಭರ್ಜರಿ ವೆಲ್‌ಕಮ್‌ ಮಾಡಿದ ಫ್ಯಾನ್ಸ್‌!

ಬೆಂಗಳೂರು : ದುನಿಯಾ ವಿಜಯ್‌ ನಟಿಸಿ ನಿರ್ದೆಶನ ಮಾಡಿರುವ ಭೀಮ ಚಿತ್ರ ಶುಕ್ರವಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆ ಆಗಿದೆ.

‘ಭೀಮ’ ದುನಿಯಾ ವಿಜಯ್ ನಿರ್ದೇಶಿಸಿರುವ ಎರಡನೇ ಸಿನಿಮಾ ಆಗಿದೆ. ‘ಸಲಗ’ ಸಿನಿಮಾ ಮೂಲಕ ಗೆಲುವು ಕಂಡಿರುವ ದುನಿಯಾ ವಿಜಯ್ ಈ ಬಾರಿ ಮತ್ತೊಂದು ಗೆಲುವಿನ ಭರವಸೆಯಲ್ಲಿದ್ದಾರೆ.  ಈ ಸಿನಿಮಾ ನೋಡಲು ಕನಿಷ್ಠ 18 ವರ್ಷ ಆಗಿರಬೇಕಾಗಿರುವುದು ಕಡ್ಡಾಯ. ಅದಕ್ಕಿಂತ ಕಡಿಮೆ ವಯಸ್ಸಿನ ದುನಿಯಾ ವಿಜಯ್‌ ಅಭಿಮಾನಿಗಳು ಈ ಚಿತ್ರವನ್ನು ನೋಡಲು ಸಾಧ್ಯವಿಲ್ಲ. ಯಾಕೆಂದರೆ ಈ ಸಿನಿಮಾಕ್ಕೆ ದೊರಕಿರುವುದು “ಎ” ಸರ್ಟಿಫಿಕೇಟ್‌.

ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸಸ್‌ನಲ್ಲಿರುವ ವಿಜಯ್ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.‌

ಈ ಚಿತ್ರದಲ್ಲಿ ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್, ಕಲ್ಯಾಣಿ, ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ, ವಿನೋದ್, ಗೌತಮ್ ಸಾಹಸ, ಧನು ನೃತ್ಯ ಭೀಮ ಸಿನಿಮಕ್ಕಿದೆ

ಕೃಷ್ಣ ಸಾರ್ಥಕ್, ಜಗದೀಶ್ ಗೌಡ ನಿರ್ಮಾಣ ಮಾಡಿರುವ ʼಭೀಮʼ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆಯನ್ನ ಹುಟ್ಟಿಸಿದೆ ಅಂದಹಾಗೆ ಭೀಮ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚರಣ್ ರಾಜ್ ಸಂಗೀತ, ಕವಿರಾಜ್ ಸಾಹಿತ್ಯ ಹಾಗೂ ದುನಿಯಾ ವಿಜಯ್ ನಟನೆ. ಈ ಮೂವರ ಸಾಹಿತ್ಯದಲ್ಲಿ  ಬರ್ತಿರುವ ಹಾಡಿನ ಮೇಲೆ ನಿರೀಕ್ಷೆ ಹೆಚ್ಚಿದೆ.

 

Post a comment

No Reviews