
ಮೈಸೂರು:ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿ ಎಲ್ ಭೋಜೇಗೌಡ ಭರ್ಜರಿ ಗೆಲವು ದಾಖಲಿಸಿದ್ದಾರೆ.
ಜೂನ್ 3 ರಂದು ನಡೆದ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ಎಲ್ ಭೋಜೇಗೌಡ ಸ್ಫರ್ಧಿಸಿದ್ರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಕೆ. ಮಂಜುನಾಥ್ ಸ್ಫರ್ಧೆಗೆ ಇಳಿದಿದ್ರು. ಚುನಾವಣ ಫಲಿತಾಂಶದಲ್ಲಿ ಮೈತ್ರಿ ಅಭ್ಯರ್ಥಿ ಭೊಜೇ ಗೌಡ ಕೆ.ಕೆ. ಮಂಜುನಾಥ್ ವಿರುದ್ಧ 5,267 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಎಲ್ ಭೋಜೇಗೌಡ ಈ ಬಾರಿ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಬಹಳ ಅಭೂತಪೂರ್ವ ಗೆಲುವು ಸಿಕ್ಕಿದೆ. ಈ ಗೆಲುವನ್ನು ಶಿಕ್ಷಕ ಸಮುದಾಯಕ್ಕೆ ಸರ್ಮಪಿಸುತ್ತೇನೆ. ತಮ್ಮ ಶಿಕ್ಷಕರು ಬಹಳ ಶ್ರಮಪಟ್ಟು ಗೆಲುವನ್ನು ತಂದುಕೊಟ್ಟಿದ್ದಾರೆ. ಕಳೆದ ಬಾರಿ ನಾನು ಜೆಡಿಎಸ್ ನಿಂದ ಏಕಾಂಗಿಯಾಗಿ ನಿಂತು ಗೆದ್ದಿದ್ದೆ. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಒಂದಾಗಿದ್ದರಿಂದ ನಮ್ಮ ಬಲ ಹೆಚ್ಚಾಗಿದೆ. ಬಿಜೆಪಿ ಜೆಡಿಎಸ್ ನ ಎಲ್ಲಾ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
Poll (Public Option)

Post a comment
Log in to write reviews