
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರು ಸ್ಪರ್ಧೆ ಯಿಂದ ಹಿಂದೆ ಸರಿದಿರುವುದಾಗಿ ಭಾನುವಾರ (ಜುಲೈ 21)ರಂದು ಘೋಷಿಸಿದ್ದಾರೆ.
ದೇಶದ ಹಿತಾಸಕ್ತಿಯಿಂದ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆಂದು ತಿಳಿಸಿದ್ದಾರೆ. ತಮ್ಮ ಉಳಿದ ಅವಧಿಯನ್ನು ಪೂರ್ಣಗೊಳಿಸುವ ಕಡೆಗೆ ಗಮನಹರಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಸ್ಥಾನಕ್ಕೆ ಭಾರತ ಸಂಜಾತೆ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಹೆಸರನ್ನು ಅನುಮೋದಿಸಿದ್ದಾರೆ. ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸೇರಿದಂತೆ ಡೆಮಾ ಕ್ರಟಿಕ್ ಪಕ್ಷದ ಮಿತ್ರರ ಒತ್ತಡದ ಹಿನ್ನೆಲೆಯಲ್ಲಿ ಬೈಡೆನ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
Poll (Public Option)

Post a comment
Log in to write reviews