
ಜೆಡಿಎಸ್ ನಾಯಕ ಹೆಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ವಿರುದ್ಧ ಸಂತ್ರಸ್ತೆಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಕುರಿತಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಯನ್ನು ನಡೆಸಲಾಯಿತು.ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಎಂದು ಹೇಳಿದೆ. ಇದ್ದರಿಂದಾಗಿ ಸದ್ಯ ಭವಾನಿಗೆ ಬಿಗ್ ರಿಲೀಪ್ ಸಿಕ್ಕಿದೆ.
ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದಿತು. ಪ್ರಕರಣದ ಪ್ರಮುಖರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಆರೋಪಿ ಮಗ ಮತ್ತು ಪತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಜಾಮೀನು ರದ್ದು ಮಾಡಲು ಯಾವುದೇ ಸಕಾರಣ ಕಾಣುತ್ತಿಲ್ಲ. ಪ್ರತಿಷ್ಠಿತ ರಾಜಕೀಯ ಕುಟುಂಬ ಎಂದು ಜಾಮೀನು ರದ್ದು ಮಾಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Poll (Public Option)

Post a comment
Log in to write reviews