2024-09-19 04:40:47

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಏರ್​​ಪೋರ್ಟ್ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: 44 ಯುವಕರು ವಶಕ್ಕೆ, 33 ಪ್ರಕರಣ ದಾಖಲು

ಬೆಂಗಳೂರುಕೆಂಪೇಗೌಡ ಅಂತರಾಷ್ಚ್ರೀಯ ವಿಮಾನ ನಿಲ್ದಾಣದಲ್ಲಿ ಬೈಕ್​​ ವ್ಹೀಲಿಂಗ್​ ನಡೆಸಿ ಪುಂಡಾಟ ಮೆರೆದಿದ್ದ 44 ಯುವಕರನ್ನು ಯಲಹಂಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೈಕ್​ ವ್ಹೀಲಿಂಗ್​​​ ಸಂಬಂಧ 33 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಯಲಹಂಕದ ಚಿಕ್ಕಜಾಲ ಬಳಿಯ ಏರ್​​ಪೋರ್ಟ್​ ರಸ್ತೆಯಲ್ಲಿ ಗುರುವಾರ ಸಂಜೆ 5 ಗಂಟೆ ಸಮಯದಲ್ಲಿ ಪುಂಡರ ಗ್ಯಾಂಗ್​ವೊಂದು ​ಬೈಕ್​ ವ್ಹೀಲಿಂಗ್​​ ಮಾಡುತ್ತಿತ್ತು. ವಿಮಾನ ನಿಲ್ದಾಣದಿಂದ ಬೆಂಗಳೂರಿನತ್ತ ಬರುತ್ತಿದ್ದ ಸಾರ್ವಜನಿಕರು ಬೈಕ್​​ ವ್ಹೀಲಿಂಗ್​​​ ಹುಚ್ಚಾಟವನ್ನು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದರು. ಈ ವೇಳೆ ಪುಂಡನೊಬ್ಬ ತನ್ನ ಮಧ್ಯದ ಬೆರಳನ್ನು ತೋರಿಸುವ ಮೂಲಕ ಕಾರಿನಲ್ಲಿದ್ದವರಿಗೆ ಬೆದರಿಕೆ ಹಾಕಿದ್ದ. ಈ ದೃಶ್ಯವನ್ನು ಕಾರಿನಲ್ಲಿದ್ದ ಪ್ರಯಾಣಿಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

''ಬೈಕ್​ ವ್ಹೀಲಿಂಗ್​​​ ಹುಚ್ಚಾಟ ನಡೆಸುವ ಮೂಲಕ ವಾಹನ ಸವಾರರ ಪ್ರಾಣಕ್ಕೆ ಕುತ್ತು ತರುತ್ತಿದ್ದಾರೆ, ಅಮಾಯಕರ ಪ್ರಾಣಕ್ಕೆ ಆಪತ್ತು ಮಾಡುತ್ತಿದ್ದಾರೆ. ಇಂತಹ ಯುವಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು'' ಎಂದು ಮನವಿ ಮಾಡಿದ್ದರು. ದೃಶ್ಯದ ಆಧಾರದ ಮೇಲೆ ಕಾರ್ಯಾಚರಣೆಗೆ ಇಳಿದ ಪೊಲೀಸರು, ಏರ್​​ಪೋರ್ಟ್ ರಸ್ತೆಯಲ್ಲಿ ವ್ಹೀಲಿಂಗ್​​ ನಡೆಸಿದ 44 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಯಲಹಂಕ ವಿಭಾಗದಲ್ಲಿ ಬೈಕ್​ ವ್ಹೀಲಿಂಗ್ ಪುಂಡರ ವಿರುದ್ಧ 33 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ದೇವನಹಳ್ಳಿ ಸಂಚಾರ ಪೊಲೀಸ್​ ಠಾಣೆಯಲ್ಲಿ 9, ಯಲಹಂಕ​ ಠಾಣೆಯಲ್ಲಿ 6 ಮತ್ತು ಹೆಬ್ಬಾಳ ಠಾಣೆಯಲ್ಲಿ 18 ಪ್ರಕರಣಗಳು ದಾಖಲಾಗಿವೆ. ಬೈಕ್​​ ವ್ಹೀಲಿಂಗ್​ ಪುಂಡರಿಗೆ ಕಡಿವಾಣ ಹಾಕಲು ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.

Post a comment

No Reviews