
ಕಲಬುರಗಿ ನಗರದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುವಂತೆ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಕೇಂದ್ರ ಕಾರಾಗೃಹದ ಕರ್ಮಕಾಂಡದ ಬಗ್ಗೆ ವರದಿ ಬೆನ್ನಲ್ಲೆ ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಇನ್ನೂ ಈ ಮಧ್ಯೆ ಇಂದು ಬಳಿಕ ಜೈಲಿನ ಮೇಲೆ ಪೊಲೀಸ್ ಆಯುಕ್ತರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಎರಡು ಮೊಬೈಲ್ ಸೇರಿದಂತೆ ಸಿಗರೇಟ್, ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ.
ಸದ್ಯ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಗಳಿಬ್ಬರು ಕೆಲ ಕೈದಿಗಳನ್ನು ವೀಡಿಯೋ ಕಾಲ್ ನೆಪದಲ್ಲಿ ಹನಿಟ್ರ್ಯಾಪ್‌ಗೆ ಕೆಡವಿ, ಅವರಿಗೆ ಹಣದ ಬೆದರಿಕೆ ಒಡ್ಡಿದ ಆರೋಪವೂ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಜೈಲಿನ ಕೈದಿಯೊಬ್ಬರ ಫೋನ್ ಕರೆಯ ಸಂಭಾಷಣೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Poll (Public Option)

Post a comment
Log in to write reviews