ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂನ್ 6 ರವರೆಗೆ ಕಾಯಬೇಕಿಲ್ಲ; ಈಗಿನಿಂದಲೇ ಹೋರಾಟ ಮಾಡಲಿ: ಡಿಸಿಎಂ
ರಾಮನಗರ: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪೊಲೀಸ್ ಠಾಣೆಗೆ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ ಎಂಬ ಅವರ ಟೀಕೆ, ಡಿಸಿಎಂ ಡಿ.ಕೆ. ಶಿವಕುಮಾರ್, ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ?” ಎಂದು ಆರ್ ಆಶೋಕ್ ಗೆ ತಿರುಗೇಟು ನೀಡಿದರು. “ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ” ಎಂದು ಕನಕಪುರದಲ್ಲಿ ನಡೆದ ಸುದ್ಧಿ ಗೊಷ್ಠಿಯಲ್ಲಿ ತಿರುಗೇಟು ನೀಡಿದ್ದಾರೆ.
ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂನ್ 6 ರವರೆಗೆ ಗಡುವು ನೀಡಿರುವ ಬಗ್ಗೆ ಕೇಳಿದಾಗ ಅವರು ಅಲ್ಲಿಯವರೆಗೂ ಕಾಯುವುದೇಕೆ? ಈಗಿನಿಂದಲೇ ಹೋರಾಟ ಮಾಡಲಿ. ಅವರು ಯಾವ ವಿಚಾರಕ್ಕೆ ಬಾಯಿ ಬಿಡಬೇಕೋ ಅದರ ಬಗ್ಗೆ ಬಿಡುತ್ತಿಲ್ಲ” ಎಂದು ಛೇಡಿಸಿದರು.
ನೈತಿಕ ಹೊಣೆಹೊತ್ತು ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂಬ ಈಶ್ವರಪ್ಪ ಅವರ ಹೇಳಿಕೆ ವಿಚಾರವಾಗಿ, ಪ್ರಕರಣದ ತನಿಖೆಯಲ್ಲಿ ವಾಸ್ತವಾಂಶ ಪರಿಶೀಲನೆ ನಡೆಯಲಿ. ನಾವು ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ” ಎಂದರು.
ನಿಮ್ಮ ವಿರುದ್ಧ ಯಾಗ ಮಾಡುತ್ತಿರುವವರು ಯಾರು ಎಂದು ಹೇಳಬಹುದಾ, ಇದಕ್ಕಾಗಿ ವಿಶೇಷ ಪೂಜೆ ಏನಾದರೂ ಇಟ್ಟುಕೊಂಡಿದ್ದೀರಾ ಎಂದು ಕೇಳಿದಾಗ, “ಯಾಗ ಯಾರು ಮಾಡಿದ್ದಾರೆ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ. ನಮಗೆ ಆಶೀರ್ವಾದ ಮಾಡಲು ನೀವು ಹಾಗೂ ಜನರು ಇದ್ದಾರೆ. ನಾನು ನಂಬಿರುವ ಶಕ್ತಿ ಇದೆ. ನಿಮ್ಮ ಪ್ರಾರ್ಥನೆ ಕಾಪಾಡಲಿದೆ” ಎಂದರು.
Post a comment
Log in to write reviews