
ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪೆಟ್ರೋಲ್ ಪ್ರತಿ ಲೀಟರ್ ಗೆ 32.98 ರೂ. ಡೀಸೆಲ್ ಪ್ರತಿ ಲೀಟರ್ ಗೆ 31.83 ರೂ. ಅಬಕಾರಿ ಸುಂಕ ಸಂಗ್ರಹ ಮಾಡುತ್ತಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಅಬಕಾರಿ ಸುಂಕ ಪೆಟ್ರೋಲ್ ಗೆ 9.48 ರೂ. ಡೀಸೆಲ್ ಗೆ 3.56 ರೂ. ವಿಧಿಸಲಾಗಿತ್ತು. ಹಾಗಾಗಿಯೇ ಆಗ ಪೆಟ್ರೋಲ್ 68.31 ರೂ. ಡಿಸೇಲ್ 48.63 ರೂ. ಗೆ ದೊರಕುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಪೆಟ್ರೋಲ್ 106 ರೂ ರೂ. ವರೆಗೆ ಹೋಗಿತ್ತು. ಯುಪಿಎ ಸರ್ಕಾರದ ಅವಧಿಯಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್ ಗೆ 97.68 ಡಾಲರ್ ಇತ್ತು. ಆಗ ಪೆಟ್ರೋಲ್ ಲೀಟರ್ 68.31 ರೂ. ಇತ್ತು. ಈಗ ಕಚ್ಚಾ ತೈಲ ಬೆಲೆ 77.64 ರೂ. ಡಾಲರ್ ಇದ್ದರೂ ಬಿಜೆಪಿ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಯಾಕೆ ಕಡಿಮೆ ಆಗಲಿಲ್ಲ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದಾಗ ಇವರ ಧ್ವನಿ ಎಲ್ಲಿ ಅಡಗಿತ್ತು. ಅಡುಗೆ ಅನಿಲ ಬೆಲೆ 419 ರೂ. ಇದ್ದದ್ದು 903 ರೂ.ಮಾಡಿದ್ದುಬಿಜೆಪಿ ಸರ್ಕಾರ. ಇದರ ಬಗ್ಗೆ ಬಿಜೆಪಿ ನಾಯಕರು ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.
Poll (Public Option)

Post a comment
Log in to write reviews