ಟಾಪ್ 10 ನ್ಯೂಸ್
ಸಿದ್ದರಾಮಯ್ಯನವರ ರಾಜೀನಾಮೆ ಬಗ್ಗೆ ಮಾತಾಡಲು ಬಿಜೆಪಿಯವರಿಗೆ ಅಧಿಕಾರವಿಲ್ಲ: ಮಧು ಬಂಗಾರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳಲು ಬಿಜೆಪಿಗರಿಗೆ ಯಾವುದೇ ಅಧಿಕಾರವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಇಂದು ವಾಗ್ದಾಳಿ ನಡೆಸಿದರು.
ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಕೇಳಲು ಸಿ.ಟಿ.ರವಿ ಯಾರು? ನಾರಾಯಣಸ್ವಾಮಿ ಯಾರು? ಅವರೇನು ಕಾಂಗ್ರೆಸ್ ಪಕ್ಷದವರಾ ಎಂದು ಪ್ರಶ್ನಿಸಿದರು.
ಈ ಬಗ್ಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಬೇಕು. ಯಾರು ತಿಪ್ಪರಲಾಗ ಹೊಡೆದರೂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಸುವ ಪ್ರಯತ್ನ ಸಂವಿಧಾನಕ್ಕೆ ವಿರುದ್ಧವಾದದ್ದು. ಹೊಟ್ಟೆ ಕಿಚ್ಚಿನಿಂದ ಸಿಎಂ ರಾಜೀನಾಮೆಗೆ ಬಿಜೆಪಿಯವರು ಒತ್ತಾಯಿಸುತ್ತಿದ್ದಾರೆ. ಅದಕ್ಕೆ ಜೆಡಿಎಸ್‌ನವರು ಸೇರಿದ್ದಾರೆ ಎಂದರು.
Poll (Public Option)

Post a comment
Log in to write reviews