
ರಾಮನಗರ : ತೈಲ ಬೆಲೆ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿಪ್ರತಿಭಟನೆ ನಡೆಸಿದರು.
ಪೆಟ್ರೋಲ್-ಡೀಸಲ್ ಬೆಲೆ ಏರಿಕೆ ಖಂಡಿಸಿ ರಾಮನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು. ಗ್ಯಾರಂಟಿ ಹೆಸರಿನಲ್ಲಿ ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಬರೆ ಎಳೆಯುತ್ತಿದೆ. ಕೂಡಲೇ ಇಂಧನ ಬೆಲೆ ಇಳಿಸಬೇಕು. ಇಲ್ಲವಾದರೆ ತೀವ್ರ ಹೋರಟ ಮಾಡುವುದಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.
Poll (Public Option)

Post a comment
Log in to write reviews