
ಬೆಂಗಳೂರು : ರಾಜ್ಯದಲ್ಲಿ ಹಾಲಿನ ದರ ಪ್ರತಿ ಲೀಟರ್‌ಗೆ 2.ರೂ ಏರಿಕೆ ಮಾಡಲಾಗಿದ್ದು, ಹಾಲಿನ ದರ ಏರಿಸಿದ್ದಕ್ಕೆ ಇದೀಗ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆರ್.ಅಶೋಕ್,ಹಾಗೂ ವಿಜಯೇಂದ್ರ ಕಿಡಿ ಕಾರಿದ್ದಾರೆ. ಬೆಲೆ ಏರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೂ ಉಪಕಾರಿಯಾಗಲಿಲ್ಲ. ಹೈನುಗಾರಿಕೆ & ಪಶುಸಂಗೋಪನೆ ಮಾಡ್ತಿರೋ ರೈತರಿಗೂ ಸ್ಪಂದಿಸಿಲ್ಲ, ಲೀಟರ್ ಹಾಲಿನ ದರ 2 ರೂ. 10 ಪೈಸೆ ಹೆಚ್ಚಳ ಮಾಡಲಾಗಿದೆ. ರಾಜ್ಯ ಸರ್ಕಾರ ಜನರ ಬದುಕಿನ ಜೊತೆ ಚೆಲ್ಲಾಟವಾಡ್ತಿದೆ,
ಇದು ಜನವಿರೋಧಿ ಸರ್ಕಾರ, ಈ ಸರ್ಕಾರವನ್ನು ಕೆಳಗಿಳಿಸಬೇಕು ಎಂದು ಬಿ.ವೈ.ವಿಜಯೇಂದ್ರ ಟ್ವೀಟ್-Xನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವವನ್ನು ಕಾಂಗ್ರೆಸ್ ಸಂಭ್ರಮಿಸ್ತಿದೆ, ಹಾಲಿಗೆ 2 ರೂ. ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸ್ತಿದೆ. 13 ತಿಂಗಳಿನಲ್ಲಿ ಹಾಲಿನ ದರವನ್ನು ಎರಡು ಬಾರಿ ಹೆಚ್ಚಿಸಿದ್ದೀರಿ. ಆಗಸ್ಟ್ ನಲ್ಲಿ 3 ರೂ. ಈಗ ಮತ್ತೊಮ್ಮೆ 2 ರೂಪಾಯಿ ಹೆಚ್ಚಳ ಮಾಡಿದ್ದೀರಿ, ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ. ಕೂಡಲೇ ಹಾಲಿನ ದರ ಏರಿಕೆ ವಾಪಸ್ ಪಡೀರಿ ಎಂದು ಅಶೋಕ್ ಆಗ್ರಹಿಸಿದ್ದಾರೆ.
Poll (Public Option)

Post a comment
Log in to write reviews