
ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಮುನಿರತ್ನ ಅವರನ್ನು ಇಂದು ಎಸ್‌ಐಟಿ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರ ವಿರುದ್ಧದ ಅತ್ಯಾಚಾರ, ಹನಿಟ್ರ್ಯಾಪ್, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣಗಳ ಕುರಿತು ಸಮಗ್ರ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ.
ಅಪರಾಧ ತನಿಖಾ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿಜಯ್ ಕುಮಾರ್ ಸಿಂಗ್ ಈ ತಂಡದ ನೇತೃತ್ವ ವಹಿಸಿಕೊಂಡಿದ್ದಾರೆ. ಕೇಂದ್ರ ವಲಯ ಐಜಿಪಿ ಲಾಭೂರಾಮ್ ಹಾಗೂ ಇಬ್ಬರು ಎಸ್ಪಿಗಳು ಈ ತಂಡದ ಸದಸ್ಯರಾಗಿದ್ದಾರೆ.
ಈ ನಡುವೆ ರಾಜ್ಯ ಸರ್ಕಾರ ಮುನಿರತ್ನ ವಿರುದ್ಧ ವಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸುಲಿಗೆ, ಜೀವ ಬೆದರಿಕೆ, ಜಾತಿ ನಿಂದನೆ, ಹಾಗೂ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ತನಿಖೆಗೆ ಎಸ್ ಐಟಿ ತಂಡವನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನಲೆ ಹೆಚ್ಚಿನ ವಿಚಾರಣೆಗಾಗಿ ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರದಿಂದಲೇ ಕಸ್ಟಡಿಗೆ ತೆಗೆದುಕೊಳ್ಳಲು ಎಸ್ ಐಟಿ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
Poll (Public Option)

Post a comment
Log in to write reviews