
ಬಾಲಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಇನ್ಸ್ಟಾಗ್ರಾಮ್ ಸ್ಟೋರೀಸ್ನಲ್ಲಿ ಮಾಡಿದ ಪೋಸ್ಟ್ನಿಂದಾಗಿ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ. ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸುವ ಕಂಗನಾ ಮಹಾತ್ಮ ಗಾಂಧೀಜಿಯವರ ಜಯಂತಿಯ ಬಗ್ಗೆ ಪ್ರಸ್ತಾಪಿಸಿರಲಿಲ್ಲ. ಮಂಡಿ ಸಂಸದೆಯಾಗಿರುವ ಕಂಗನಾ ರಣಾವತ್ ಲೋಕಸಭೆ ಚುನಾವಣೆಯಲ್ಲಿ ಗೆದ್ದಾಗಿನಿಂದ ಅವರ ಹೇಳಿಕೆಗಳಿಗಾಗಿ ತೀವ್ರ ಟೀಕೆಗೆ ಗುರಿಯಾಗಿದ್ದರು. ಇತ್ತೀಚೆಗಷ್ಟೆ, ರೈತರ ಪ್ರತಿಭಟನೆಗಳ ಕುರಿತು ಅವರ ಹೇಳಿಕೆಗಳು ವಿರೋಧ ಪಕ್ಷದ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿತ್ತು.
ದೇಶಕ್ಕೆ ತಂದೆ ಇಲ್ಲ, ಅದಕ್ಕೆ ಮಕ್ಕಳಿದ್ದಾರೆ. ಭಾರತಮಾತೆಯ ಈ ಮಕ್ಕಳು ಧನ್ಯರು” ಎಂದು ಕಂಗನಾ ರಣಾವತ್ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದರು. ಇನ್ನೊಂದು ಪೋಸ್ಟ್ನಲ್ಲಿ ದೇಶದಲ್ಲಿ ಸ್ವಚ್ಛತೆ ಕಾಪಾಡುವ ಮಹಾತ್ಮ ಗಾಂಧಿಯವರ ಪರಂಪರೆಯನ್ನು ಮುನ್ನಡೆಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದ್ದರು. ಇದೀಗ ಬಿಜೆಪಿ ಸಂಸದೆ ಕಂಗನಾ ರಣಾವತ್ ಮಹಾತ್ಮಾ ಗಾಂಧಿಯವರ ಜನ್ಮದಿನದಂದು ವ್ಯಂಗ್ಯವಾಡಿದ್ದಾರೆ. ಗೋಡ್ಸೆ ಆರಾಧಕರು ಬಾಪು ಮತ್ತು ಶಾಸ್ತ್ರಿ ಅವರ ನಡುವೆ ವ್ಯತ್ಯಾಸವನ್ನು ತೋರಿಸುತ್ತಾರೆ. ಪಿಎಂ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಹೊಸ ಗೋಡ್ಸೆ ಭಕ್ತಳನ್ನು ಮನಃಪೂರ್ವಕವಾಗಿ ಕ್ಷಮಿಸುವರೇ? ರಾಷ್ಟ್ರಪಿತ ಇದ್ದಾರೆ, ಪುತ್ರರಿದ್ದಾರೆ. ಹುತಾತ್ಮರಾದವರು ಎಲ್ಲರೂ ಗೌರವಕ್ಕೆ ಅರ್ಹರು ಎಂದು ಸುಪ್ರಿಯಾ ಹೇಳಿದ್ದರು.
Poll (Public Option)

Post a comment
Log in to write reviews