2024-09-19 04:56:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚುನಾವಣೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಹಿಂಪಡೆದ ಬಿಜೆಪಿ!

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ, ಕೂಡಲೇ ಹಿಂಪಡೆದಿದೆ.

ಪಟ್ಟಿಯನ್ನು ಮರುಪರಿಶೀಲಿಸಲಾಗುತ್ತಿದೆ ಮತ್ತು ಪಕ್ಷವು ಶೀಘ್ರದಲ್ಲೇ 'ಪುನರ್ ರಚಿಸಿದ' ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಗಳು ನಡೆಯುತ್ತಿವೆ. ಆದರೆ, ಈ ಚುನಾವಣೆಗೆ ಬಿಜೆಪಿಯು ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಲವಾರು ಖ್ಯಾತನಾಮರ ಹೆಸರುಗಳು ಇಲ್ಲದಿರುವುದು ಆಶ್ಚರ್ಯ ಮೂಡಿಸಿದೆ.

ಈಗ ಹಿಂಪಡೆಯಲಾದ ಪಟ್ಟಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದ್ರ ರೈನಾ, ಮಾಜಿ ಉಪಮುಖ್ಯಮಂತ್ರಿಗಳಾದ ಕವಿಂದರ್ ಗುಪ್ತಾ ಮತ್ತು ನಿರ್ಮಲ್ ಸಿಂಗ್ ಅವರ ಹೆಸರೇ ಇರಲಿಲ್ಲ. ಪಟ್ಟಿಯಲ್ಲಿ ಮೊದಲ ಹಂತಕ್ಕೆ 15, ಎರಡನೇ ಹಂತಕ್ಕೆ 10 ಮತ್ತು ಮೂರನೇ ಮತ್ತು ಅಂತಿಮ ಹಂತದ ಚುನಾವಣೆಗೆ 19 ಸೇರಿದಂತೆ ಒಟ್ಟು 44 ಅಭ್ಯರ್ಥಿಗಳನ್ನು ಹೆಸರಿಸಲಾಗಿತ್ತು.

ಡಿಲಿಮಿಟೇಶನ್ ಪ್ರಕ್ರಿಯೆಯ ನಂತರ ಅನೇಕ ವಿಧಾನಸಭಾ ಸ್ಥಾನಗಳನ್ನು ಮರು ವಿಂಗಡಣೆ ಮಾಡಲಾಗಿದೆ ಮತ್ತು ಅದೇ ಕಾರಣದಿಂದ ಆಯಾ ಕ್ಷೇತ್ರಗಳ ಬದಲಾದ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 19, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. 2019 ರಲ್ಲಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಕೇಂದ್ರಾಡಳಿತ ಪ್ರದೇಶದಲ್ಲಿ ಚುನಾವಣೆ ನಡೆಯುತ್ತಿರುವುದು ಇದೇ ಮೊದಲು.

ಈ ಹಿಂದೆ 2014ರಲ್ಲಿ ಕೊನೆಯ ಬಾರಿ ಇಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. ಆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದರೆ, ಪಿಡಿಪಿ 28 ಸ್ಥಾನಗಳನ್ನು ಗಳಿಸಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.

ಈ ಬಾರಿ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಚುನಾವಣಾ ಮೈತ್ರಿ ಮಾಡಿಕೊಂಡಿವೆ. ಆದರೆ, ಸ್ಥಾನಗಳ ಹಂಚಿಕೆಯಲ್ಲಿ ಎರಡೂ ಪಕ್ಷಗಳ ನಡುವೆ ಕಿತ್ತಾಟ ಮುಂದುವರೆದಿದೆ. ಈ ಮೈತ್ರಿಯನ್ನು ಅಪಹಾಸ್ಯ ಮಾಡಿರುವ ಬಿಜೆಪಿ, 370 ನೇ ವಿಧಿಯ ಬಗ್ಗೆ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಮತ್ತು ಜನತೆಯನ್ನು ಲಘುವಾಗಿ ಪರಿಗಣಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದೆ.

 

Post a comment

No Reviews