
ಚಂಡೀಗಢ: ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ರಾಜ್ಯದಲ್ಲಿ ‘ಹಿಂದುಳಿದ ವರ್ಗಗಳ ಸಮ್ಮಾನ್ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಅವರು, ಒಬಿಸಿ ಮೀಸಲಾತಿಗೆ ಸಂಬಂಧಿಸಿದಂತೆ ಕಾಕಾ ಕಾಲೇಕರ್ ಆಯೋಗವು ಮಾಡಿದ ಶಿಫಾರಸುಗಳನ್ನು ಕಾಂಗ್ರೆಸ್ ವರ್ಷಗಳಿಂದ ಜಾರಿಗೆ ತಂದಿಲ್ಲ ಎಂದು ಕಿಡಿಕಾರಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಒಬಿಸಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ಮೀಸಲಾತಿ ನೀಡಿದೆ. ಅವರು ಅಧಿಕಾರಕ್ಕೆ ಬಂದರೆ, ಇಲ್ಲಿಯೂ ಹಾಗೇ ಮಾಡುತ್ತಾರೆ ಅದಕ್ಕೆ ಹರಿಯಾಣದಲ್ಲಿ ಅವಕಾಶವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
Poll (Public Option)

Post a comment
Log in to write reviews