
ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆ ವೇಳೆ ಹೃದಯಾಘಾತದಿಂದ ಬಿಜೆಪಿ ಕಾರ್ಯಕರ್ತೆ ಮೃತಪಟ್ಟಿರುವ ಘಟನೆ (BJP-JDS Padayatra) ಸೋಮವಾರ ಸಂಭವಿಸಿದೆ.
ಆಸ್ಪತ್ರೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ವಿವಿಧ ಮುಖಂಡರು ಭೇಟಿ ನೀಡಿ ಅಂತಿಮ ದರ್ಶನ್ ಪಡೆದಿದ್ದಾರೆ.
ಬೆಂಗಳೂರಿನ ಬನಶಂಕರಿಯ ಗೌರಮ್ಮ (72) ಎಂಬುವರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ಪಾದಯಾತ್ರೆ ವೇಳೆ ಹೃದಯಾಘಾತವಾಗಿದ್ದರಿಂದ ಅವರು ಅಸ್ವಸ್ಥಗೊಂಡಿದ್ದರು. ಅವರನ್ನು ಕೂಡಲೇ ಚನ್ನಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ನಿಖಿಲ್ ಕುಮಾರಸ್ವಾಮಿ ತೆರಳಿ ಅಂತಿಮ ದರ್ಶನ ಪಡೆದು, ಮೃತರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ.
Poll (Public Option)

Post a comment
Log in to write reviews