
ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮ್ಯಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಘೇರಾವ್ ಹಾಕಿದ್ದು, ಈ ವೇಳೆ ಪೊಲೀಸರು ಕೆಲ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ದ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಬ್ಯಾರಿಕೆಡ್ ನಿಂದ ಒಳಗೆ ನುಗ್ಗಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರ ಪ್ರಯತ್ನವನ್ನು ತಡೆದ ಪೊಲೀಸರು, ಕೆಲವರನ್ನು ವಶಕ್ಕೆ ಪಡೆದು ಸ್ಥಳದಿಂದ ಹೊತ್ತೊಯ್ದಿದ್ದಾರೆ.
Poll (Public Option)

Post a comment
Log in to write reviews