ಮೆಟ್ರೋ ಹಳದಿ ಲೈನ್ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮಹತ್ವದ ಅಪ್ಡೇಟ್ ನೀಡಿದೆ. ಯೆಲ್ಲೋ ಲೈನ್ ಮಾರ್ಗದಲ್ಲಿ ಆರ್ವಿ ರಸ್ತೆಯಿಂದ ಎಲೆಕ್ಟ್ರಾನಿಕ್ಸ್ ಸಿಟಿ ಮೂಲಕ ಬೊಮ್ಮಸಂದ್ರದವರೆಗೆ 2025 ರ ಜನವರಿಯಿಂದ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಪ್ರತಿ 30 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ. ಈ ವರ್ಷ ಡಿಸೆಂಬರ್ನಲ್ಲಿ ರೈಲು ಸುರಕ್ಷತಾ ಆಯುಕ್ತರಿಂದ ತಪಾಸಣೆ ನಡೆಯಲಿದೆ. ಈ ಮಾರ್ಗದ ಸಂಚಾರಕ್ಕಾಗಿ ನವೆಂಬರ್-ಡಿಸೆಂಬರ್ ವೇಳೆಗೆ ಮೂರು ರೈಲುಗಳು ಲಭ್ಯವಿರಲಿವೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಸಿಗ್ನಲಿಂಗ್ ವ್ಯವಸ್ಥೆ ಮತ್ತು ರೋಲಿಂಗ್ ಸ್ಟಾಕ್ಗೆ ಸಂಬಂಧಿಸಿ ರೈಲ್ವೆ ಮಂಡಳಿಯಿಂದ ತಾಂತ್ರಿಕ ಅನುಮೋದನೆ ದೊರೆತಿದ್ದು, ಮುಂದಿನ ಪ್ರಕ್ರಿಯೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಮುಂದಿನ ವರ್ಷ ಮಾರ್ಚ್ನಿಂದ ತಿಂಗಳಿಗೆ ಎರಡು ರೈಲುಗಳಂತೆ ಪಶ್ಚಿಮ ಬಂಗಾಳದ ಟಿಟಾಗರ್ ರೈಲ್ ಸಿಸ್ಟಮ್ಸ್ ಲಿಮಿಟೆಡ್ನಿಂದ ರೈಲುಗಳು ಪೂರೈಕೆಯಾಗಲಿವೆ. ರೀಚ್-5 ಮಾರ್ಗದ ಎಲ್ಲಾ 15 ರೈಲುಗಳು 2025 ರ ಆಗಸ್ಟ್ ವೇಳೆಗೆ ಕಾರ್ಯಾಚರಣೆಗೆ ಸಿದ್ಧವಾಗಿರಲಿವೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ತಿಳಿಸಿದೆ.
Post a comment
Log in to write reviews