
ಬೆಂಗಳೂರು: ನಗರದ ಎಂಜಿ ರಸ್ತೆಯಲ್ಲಿ ಬೆಳಗ್ಗೆ ಮಹಾನಗರ ಸಾರಿಗೆ ಬಸ್ಸೊಂದು ಹೊತ್ತಿ ಉರಿದಿದೆ. ಬಸ್‌ನಲ್ಲಿ 30 ಜನ ಪ್ರಯಾಣಿಕರಿದ್ದು ಅಪಾಯದಿಂದ ಪಾರಾಗಿದ್ದಾರೆ.
ಬಿಎಂಟಿಸಿ ಬಸ್ ರೋಸ್ ಗಾರ್ಡನಿಂದ ಶಿವಾಜಿನಗರಕ್ಕೆ ಬರುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್‌ನಲ್ಲಿ ಚಾಲಕ ಬಸ್ ಬಂದ್ ಮಾಡಿದ್ದರು. ಬಳಿಕ ಬಸ್ ಸ್ಟಾರ್ಟ್ ಮಾಡಿದಾಗ ಸ್ಟಾರ್ಟ್ ಆಗಿಲ್ಲ, ಪುನಃ 2 ರಿಂದ 3 ಸಲ ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಆದರೆ, ಸ್ಟಾರ್ಟ್ ಆಗದೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿ ಅನಾಹುತದಿಂದ ತಪ್ಪಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
Poll (Public Option)

Post a comment
Log in to write reviews