
2024-25ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಿದ್ಯಾರ್ಥಿ ಪಾಸ್‌ಗಳನ್ನು (BMTC Student Bus Pass) ವಿತರಣೆ ಆರಂಭಿಸಲಿದೆ. ಈ ಪಾಸ್‌ಗಳಿಗಾಗಿ ಅರ್ಜಿಗಳನ್ನು ಮೇ 29 ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ. ಜೂನ್ 1 ರಿಂದ ಬೆಂಗಳೂರು ಒನ್ ಕೇಂದ್ರಗಳಲ್ಲಿ ಪಾಸ್ ವಿತರಣೆ ಪ್ರಾರಂಭವಾಗುತ್ತದೆ.
ಬೆಂಗಳೂರು ನಗರದ ಕೆಂಪೇಗೌಡ ಬಸ್ ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಶಾಂತಿನಗರ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಡಿಪೋ-19, ಮತ್ತು ಕೆಎಸ್‌ಆರ್‌ಟಿಸಿ ಆನೇಕಲ್ ಬಸ್ ನಿಲ್ದಾಣ ಸೇರಿದಂತೆ ಬೆಂಗಳೂರು ಒನ್ ಕೇಂದ್ರಗಳು ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ವಿದ್ಯಾರ್ಥಿಗಳು ಪಾಸ್‌ಗಳಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇವರನ್ನು ಸಂಪರ್ಕಿಸಿ
ಹೆಚ್ಚುವರಿಯಾಗಿ ಶಕ್ತಿ ಯೋಜನೆಯಡಿಯಲ್ಲಿ ಕರ್ನಾಟಕದ ವಿದ್ಯಾರ್ಥಿನಿಯರು BMTC ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣಕ್ಕೆ ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು BMTC ಕಾಲ್ ಸೆಂಟರ್ 080- 22483777 ಗೆ ಸಂಪರ್ಕಿಸಬಹುದು ಅಥವಾ BMTC ವಿದ್ಯಾರ್ಥಿ ಪಾಸ್ - ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (karnataka.gov.in)ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
Poll (Public Option)

Post a comment
Log in to write reviews